ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಅಪಹರಿಸಿ ರೇಪ್ ಕೇಸ್‌; ಆರೋಪಿಗೆ 7 ವರ್ಷ ಕಠಿಣ ಸಜೆ

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯನ್ನು ಅಪಹರಣಗೈದು ಅತ್ಯಾಚಾರ ಮಾಡಿರುವ ವ್ಯಕ್ತಿಯ ಮೇಲಿನ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಲಾಗಿದೆ.

ಆರೋಪಿ ಮಂಗಳೂರಿನ ಸುಧಾಕರ ಪೂಜಾರಿ 2014ರ ಡಿ.6ರಂದು ಈ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡುವ ದುರುದ್ದೇಶದಿಂದ ಮಂಗಳೂರಿನಿಂದ ಮೈಸೂರಿಗೆ ಅಪಹರಿಸಿಕೊಂಡು ಹೋಗಿದ್ದ ಎನ್ನಲಾಗಿದೆ. ಬಳಿಕ ಮೈಸೂರಿನ ಪಾಂಡವಪುರ ಬಸವನಗುಡಿ ದೇವಸ್ಥಾನದಲ್ಲಿ ತಾಳಿ ಕಟ್ಟಿ ಬಳಿಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ. ಈ ವೇಳೆ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದ. ಈ ಆರೋಪದಡಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಧಾಕರ ಪೂಜಾರಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಆರ್.ಆರ್.ಕಲ್ಯಾಣ್ ಶೆಟ್ಟಿ ಸುಧಾಕರ್ ಪೂಜಾರಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿಯವರು ಸುಧಾಕರ ಪೂಜಾರಿಗೆ ಅತ್ಯಾಚಾರ ಎಸಗಿರುವ ಆರೋಪಕ್ಕೆ 7 ವರ್ಷ ಮತ್ತು ಅಪಹರಣ ಆರೋಪಕ್ಕೆ ಸಂಬಂಧಿಸಿ ಐದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿ ತೀರ್ಪು ಪ್ರಕಟಿಸಿದ್ದಾರೆ‌. ಆರೋಪಿ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕು.

ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ . ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.

Edited By : Vijay Kumar
PublicNext

PublicNext

14/08/2022 11:05 pm

Cinque Terre

29.3 K

Cinque Terre

4

ಸಂಬಂಧಿತ ಸುದ್ದಿ