ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ; ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೈಕಂಬದ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರದರ್ಶನ ಮಾಡಿರುವ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾದ್ದಾಂತ ಮಾಡಿರುವ ಹಲವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಯಾಝ್, ಮನ್ಸೂರ್, ಅಶ್ರಫ್, ಶಾಹಿಕ್ ಹಾಗೂ ಇನ್ನಿತರರ ಮೇಲೆ ಪ್ರಕರಣ ದಾಖಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿನ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೈಕಂಬದ ಬೆಥನಿ‌ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ್ದರು. ಮಧ್ಯಾಹ್ನ 12.30 ಸುಮಾರಿಗೆ ಕಾರ್ಯಕ್ರಮದ ಕೊನೆಗೆ ನೃತ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು.‌

ಈ ವೇಳೆ ಸಾವರ್ಕರ್ ಭಾವಚಿತ್ರವನ್ನು ಪ್ರದರ್ಶಿಸಿದನ್ನು ಆಕ್ಷೇಪಿಸಿ ಆರೋಪಿಗಳು ಶಾಲಾ ಮುಖ್ಯೋಪಾಧ್ಯಾಯಿನಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಾಗಿ ಕೆಲ ಆರೋಪಿಗಳ ವಿರುದ್ಧ ಗುರುಪುರ ಗ್ರಾಪಂ ಪಿಡಿಒ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

16/08/2022 03:28 pm

Cinque Terre

22.6 K

Cinque Terre

0

ಸಂಬಂಧಿತ ಸುದ್ದಿ