ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಾರೆ ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ

ಸುಳ್ಯ: ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಲಾಗಿದೆ.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ, ಅಭಿಲಾಶ್, ಸುನಿಲ್ ಕೆ, ಸುಧೀರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಇವರ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಆರೋಪಿಗಳು ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ಇಂದು ನ್ಯಾಯಾಂಗ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನವನ್ನು ಆಗಸ್ಟ್ ೨೯ ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

Edited By : Nagaraj Tulugeri
PublicNext

PublicNext

16/08/2022 10:12 pm

Cinque Terre

39.81 K

Cinque Terre

0

ಸಂಬಂಧಿತ ಸುದ್ದಿ