ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲೈಂಗಿಕ ಕಿರುಕುಳದ ಆರೋಪಿ ವಕೀಲ ರಾಜೇಶ್ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

ಮಂಗಳೂರು: ತನ್ನಲ್ಲಿಗೆ ಇಂಟರ್ ಶಿಪ್ ಗೆಂದು ಬಂದಿರುವ ನಗರದ ಕಾನೂನು ಪದವಿ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ಪೊಲೀಸರು ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಇಂಟರ್ನ್ ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಗೆ 2021ರ ಸೆ.25 ರಂದು ಮಧ್ಯಾಹ್ನ ವಕೀಲ ಕೆಎಸ್ಎನ್ ರಾಜೇಶ್ ತನ್ನ ಕಚೇರಿಯಲ್ಲಿಯೇ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಆಕೆಗೆ ಜೀವಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ಸಲ್ಲಿಸಿದ್ದಳು. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತಡ ಆರೋಪಿ ಬಹಳ ಕಾಲದವರೆಗೆ ತಲೆ ಮರೆಸಿಕೊಂಡು ಬಳಿಕ ಪೊಲೀಸರಿಗೆ ಸೆರೆಸಿಕ್ಕಿದ್ದ.

ಅಲ್ಲದೆ ವಕೀಲ ಕೃತ್ಯವನ್ನು ಮರೆಗೊಳಿಸುವ ಉದ್ದೇಶದಿಂದ ಸಂತ್ರಸ್ತೆಯ ಸ್ನೇಹಿತೆಯಿಂದಲೇ ಒತ್ತಾಯದಿಂದ ಸಹಿಯನ್ನು ಪಡೆದುಕೊಂಡಿದ್ದ. ಆ ಬಳಿಕ ಹರಿದಾಡಿದ ಆಡಿಯೋ ತುಣುಕಿನ ಬಗ್ಗೆಯೂ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ. ಆತನಿಗೆ ಅನಂತ ಭಟ್ ಮತ್ತು ಅಚ್ಯುತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಆ ಬಳಿಕ ಎಸಿಪಿ ದಿನಕರ ಶೆಟ್ಟಿ ತನಿಖೆಯನ್ನು ಮುಂದುವರಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

18/08/2022 11:46 am

Cinque Terre

8.1 K

Cinque Terre

2

ಸಂಬಂಧಿತ ಸುದ್ದಿ