ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದಸ್ತಗಿರಿಗೆ ತೆರಳಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಕುಖ್ಯಾತ ದನಕಳ್ಳ ಅಂದರ್

ಮಂಗಳೂರು: ದಸ್ತಗಿರಿಗೆ ತೆರಳಿರುವ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವರಿಗೆ ಹಲ್ಲೆ ನಡೆಸಿ ಪರಾರಿಯಾಲೆತ್ನಿಸಿದ ಕುಖ್ಯಾತ ದನಕಳವು ಆರೋಪಿಯನ್ನು ಮಂಗಳೂರು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಮಂಗಳೂರಿನ ಬೆಂಗ್ರೆ ಕಸಬಾ ನಿವಾಸಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್(35) ಬಂಧಿತ ಆರೋಪಿ. ಈತ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ದನಗಳವು ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿತನಾಗಿ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ. ಆದರೆ ಆ ಬಳಿಕ ಈ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಲು ತೆರಳಿದ್ದರು. ಈ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆದರೆ ಪೊಲೀಸರು ಆತನನ್ನು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಆರೋಪಿಯ ವಿರುದ್ದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಅಧಿಕ ದನಕಳ್ಳತನ ಪ್ರಕರಣಗಳು ದಾಖಲಾಗಿದೆ. ಈತ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

23/08/2022 10:45 pm

Cinque Terre

6.52 K

Cinque Terre

0