ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಮಲತಂದೆಗೆ 5 ವರ್ಷ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಲತಂದೆಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ಎಫ್.ಟಿ.ಎಸ್.ಸಿ -1 ನ್ಯಾಯಾಲಯವು 5 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿನ ಬಾಡಿಗೆ ಮನೆ ನಿವಾಸಿ ರಂಜಿತ್ ಕುಮಾರ್ ಜೈಲು ಶಿಕ್ಷೆಗೊಳಗಾದ ಅಪರಾಧಿ. ರಂಜಿತ್ ಕುಮಾರ್ ನನ್ನು ಅಪ್ರಾಪ್ತೆಯ ತಾಯಿ ಎರಡನೇ ವಿವಾಹವಾಗಿದ್ದರು. 2019ರ ಮೇ 8 ರಂದು ಮುಂಜಾನೆ ಈತ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ಆರೋಪಿಯ ಕೃತ್ಯವನ್ನು ಪ್ರತ್ಯಕ್ಷ ಕಂಡ ಬಾಲಕಿಯ ತಾಯಿಯು ಪ್ರಶ್ನಿಸಿದ್ದಾರೆ. ಆಗ ರಂಜಿತ್ ಕುಮಾರ್ ಆಕೆಯನ್ನು ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆಯನ್ನೊಡ್ಡಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ನೀಡಿದ್ದ ದೂರಿನಂತೆ ರಂಜಿತ್ ಕುಮಾರ್ ವಿರುದ್ಧ ಪೊಕ್ಸೊ ಹಾಗೂ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಾಗಿತ್ತು.

ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಸೈ ಸಾವಿತ್ರಿ ನಾಯಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡು ವಾದ ಪ್ರತಿವಾದವನ್ನು ಆಲಿಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ಎಫ್.ಟಿ.ಎಸ್.ಸಿ -1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿಯವರು ರಂಜಿತ್ ಕುಮಾರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಅಲ್ಲದೇ ಸಂತ್ರಸ್ತ ಬಾಲಕಿಗೆ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

28/08/2022 05:26 pm

Cinque Terre

17.15 K

Cinque Terre

0

ಸಂಬಂಧಿತ ಸುದ್ದಿ