ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಶಿಕ್ಷಣ ,ವೈದ್ಯಕೀಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಗೆ "ಡ್ರಗ್ಸ್ " ಸವಾಲು!

ಉಡುಪಿ : ಉಡುಪಿ ಜಿಲ್ಲೆ ಹಲವು ಬ್ಯಾಂಕ್ ಗಳ ತವರು. ಶಿಕ್ಷಣಕ್ಕಂತೂ ರಾಜ್ಯ, ದೇಶ ವಿದೇಶಗಳಲ್ಲೂ ಫೇಮಸ್. ಶಿಕ್ಷಣಕ್ಕಾಗಿ ಸಾವಿರಾರು ವಿದ್ಯಾರ್ಥಿಗಳು ವಿದೇಶಗಳಿಂದ ಉಡುಪಿ ಜಿಲ್ಲೆಗೆ ಆಗಮಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು, ಆತಂಕಕ್ಕೀಡುಮಾಡುವ ವಿಷಯವಾಗಿದೆ. ಮಾತ್ರವಲ್ಲ ಪೊಲೀಸ್ ಇಲಾಖೆಗೂ ಈ ಪಿಡುಗು ಸವಾಲಾಗಿ ಪರಿಣಮಿಸಿದೆ.

ಇಲ್ಲಿನ ಬಹುತೇಕ ಡ್ರಗ್ಸ್ ವ್ಯಸನಿಗಳು ಇಪ್ಪತ್ತರಿಂದ ಮೂವತ್ತರ ಒಳಗಿನ ವಯೋಮಾನದವರು. ಜಿಲ್ಲೆಯ ಪ್ರಮುಖ ನಗರಗಳಲ್ಲಿ ಮಾದಕ ದ್ರವ್ಯ ವ್ಯಸನಿಗಳ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಗಾಂಜಾ, ಅಫೀಮು, ಡ್ರಗ್ಸ್ ದಂಧೆ ಮಟ್ಟ ಹಾಕಲು, ನೂತನ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಖಡಕ್ ಕಾರ್ಯಚರಣೆ ನಡೆಸುತ್ತಿದ್ದಾರೆ.

ನೀವು ನಂಬಲಿಕ್ಕಿಲ್ಲ,ಕಳೆದ ಇಪ್ಪತ್ತು ದಿನಗಳಲ್ಲಿ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಮಾದಕ ವ್ಯಸನಿಗಳ ವಿರುದ್ದ ದೂರು ದಾಖಲಿಸಲಾಗಿದೆ. ಜಿಲ್ಲೆಯ ಪ್ರಮುಖ ನಗರಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಪೊಲೀಸ್ ರೌಂಡ್ಸ್ ಹೆಚ್ಚಿಸಲಾಗಿದ್ದು, ಅನುಮಾನ ಬಂದವರನ್ನು ವಿಚಾರಣೆ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೆ ಜಿಲ್ಲೆಗೆ ಎಸ್ಪಿಯಾಗಿ ಬಂದಿರುವ ಹಾಕೆ ಅಕ್ಷಯ್ ಮಚ್ಚೀಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮುಖ್ಯವಾಗಿ ಕಾಲೇಜು ಕ್ಯಾಂಪಸ್ ,ಬೀಚ್ ,ಪ್ರವಾಸಿ ತಾಣಗಳಲ್ಲಿ ಈ ವ್ಯಸನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ.ಇಂತಹ ಹಲವು ಸ್ಥಳಗಳನ್ನು ಗುರುತಿಸಿರುವ ಪೊಲೀಸರು ಕಾರ್ಯಾಚರಣೆಯನ್ನು ಬಿಗಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಮಾದಕ ವ್ಯಸನಕ್ಕೆ ಬಲಿಯಾಗದಂತೆ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಇದರ ಜೊತೆಗೆ, ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡವರ ವಿರುದ್ದ ಕಠಿಣ ಕ್ರಮಗಳನ್ನು ಜರಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಸಿಕ್ಕಿ ಬಿದ್ದರೆ, ಜೈಲು ಶಿಕ್ಷೆ, ಗಡಿಪಾರು ಇತ್ಯಾದಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಎಚ್ಚರಿಕೆ ನೀಡಿದ್ದಾರೆ.

ರಹೀಂ ಉಜಿರೆ ಪಬ್ಲಿಕ್ ನೆಕ್ಸ್ಟ್ ಉಡುಪಿ

Edited By :
Kshetra Samachara

Kshetra Samachara

08/09/2022 10:05 pm

Cinque Terre

16.83 K

Cinque Terre

1