ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದಾತನಿಗೆ ಜಾಮೀನು

ಮಂಗಳೂರು: ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಬಂಟ್ವಾಳದ ಹರ್ಷಿತ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸರಣಿ ಹತ್ಯೆ ಪ್ರಕರಣದಲ್ಲಿ ಜುಲೈ 28ರಂದು ನಡೆದ ಫಾಝಿಲ್ ಹತ್ಯೆ ಪ್ರಕರಣವೂ ಒಂದಾಗಿದ್ದು, ಈ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಇದೇ ವೇಳೆ ಆರೋಪಿಗಳಿಗೆ ಆಶ್ರಯ ನೀಡಿರುವ ಆರೋಪದಲ್ಲಿ ಬಂಟ್ವಾಳದ ಹರ್ಷಿತ್ ನನ್ನು ಬಂಧಿಸಲಾಗಿತ್ತು.

ಫಾಝಿಲ್ ನನ್ನು ಹತ್ಯೆ ಮಾಡಿರುವ ಆರೋಪಿಗಳನ್ನು ಹರ್ಷಿತ್ ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ್ದ. ಈ ಹಿನ್ನೆಲೆಯಲ್ಲಿ ಹರ್ಷಿತ್ ನನ್ನು ಆಗಸ್ಟ್ 17 ರಂದು ಬಂಧಿಸಲಾಗಿತ್ತು. ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದೆ. ಇದೀಗ ಆತ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.

Edited By : Abhishek Kamoji
Kshetra Samachara

Kshetra Samachara

16/09/2022 03:14 pm

Cinque Terre

11.65 K

Cinque Terre

0

ಸಂಬಂಧಿತ ಸುದ್ದಿ