ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ಅಪರಾಧಿಗೆ 3 ವರ್ಷಗಳ ಜೈಲು

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊರೊ) ಎಫ್‌ಟಿಎಸ್- 1 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಕೊಕ್ಕಡ ನಿವಾಸಿ ಪದ್ಮನಾಭ ಎಂಬಾತ 2019ರ ಆ.17 ರಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿ ಆಕೆಯ ಕೈ ಹಿಡಿದು ಎಳೆದಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿರುವ ಅಂದಿನ ಠಾಣಾ ನಿರೀಕ್ಷಕ ಎಲ್ ಚಂದ್ರಶೇಖರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸಿರುವ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್‌ಟಿಎಸ್- 1 ನ್ಯಾಯಾಲಯವು ಆರೋಪಿತನ ಮೇಲಿನ ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಮಂಜುಳಾ ಇಟ್ಟಿ, ಅಪರಾಧಿಗೆ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿ 3 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

Edited By : Vijay Kumar
Kshetra Samachara

Kshetra Samachara

24/09/2022 12:52 pm

Cinque Terre

7.79 K

Cinque Terre

0

ಸಂಬಂಧಿತ ಸುದ್ದಿ