ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಪಿಎಫ್ಐ, ಸಹ ಸಂಘಟನೆಗಳ 12 ಕಚೇರಿಗಳಿಗೆ ಬೀಗಮುದ್ರೆ

ಮಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪಿಎಫ್ಐ ಸಂಘಟನೆ ಹಾಗೂ ಅದರ ಅಂಗ ಸಂಸ್ಥೆಗಳನ್ನು ಬ್ಯಾನ್ ಮಾಡಿರುವ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸರು ಈ ಸಂಘಟನೆಗಳ 12 ಕಚೇರಿಗಳಿಗೆ ಬೀಗಮುದ್ರೆ ಜಡಿದಿದ್ದಾರೆ‌.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 10 ಪಿಎಫ್ಐ ಕಚೇರಿಗಳು, 1 ಸಿಎಫ್ಐ ಕಚೇರಿ, 1 ಐಇ ಕಚೇರಿಗೆ ಬೀಗ ಜಡಿಯಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯ ಕಸಬಾ ಬೆಂಗ್ರೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು, ಕಾಟಿಪಳ್ಳ -2ನೇ ಬ್ಲಾಕ್, ಬಜ್ಪೆ ಠಾಣಾ ವ್ಯಾಪ್ತಿಯ ಅಡ್ಡೂರು, ಕಿನ್ನಿಪದವು, ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್, ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೂರು, ಮಂಗಳೂರು ಸೌತ್ ಠಾಣಾ ವ್ಯಾಪ್ತಿಯ ನೆಲ್ಲಿಕಾಯಿ ರಸ್ತೆ,‌ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಕುದ್ರೋಳಿ - ಕರ್ಬಲಾ ರಸ್ತೆಯ ಕಚೇರಿಗಳು ಸೇರಿ ಪಿಎಫ್ಐನ ಒಟ್ಟು 10 ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.

ಅದೇ ರೀತಿ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಅಝಿಝುದ್ದೀನ್ ರಸ್ತೆಯ ಒಂದು ಸಿಎಫ್ಐ ಕಚೇರಿ ಹಾಗೂ ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯ ರಾವ್ ಆ್ಯಂಡ್ ರಾವ್ ಸರ್ಕಲ್ ನ ಇನ್ಫಾರ್ಮೇಶನ್ ಆ್ಯಂಡ್ ಎಂಪವರ್ ಮೆಂಟ್ ಕಚೇರಿಗೆ ಪೊಲೀಸರು ಬೀಗಮುದ್ರೆಯನ್ನು ಜಡಿದಿದ್ದಾರೆ.

Edited By : Nagaraj Tulugeri
PublicNext

PublicNext

28/09/2022 11:04 pm

Cinque Terre

51.91 K

Cinque Terre

12

ಸಂಬಂಧಿತ ಸುದ್ದಿ