ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಂಚ ಸ್ವೀಕಾರದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಲೋಕಾಯುಕ್ತ ಬಲೆಗೆ...!

ಮಂಗಳೂರು: ಮಂಗಳೂರು ಮಿನಿ ವಿಧಾನಸೌಧದ ಲಂಚಾವತಾರವನ್ನು ಮಂಗಳೂರು ಲೋಕಾಯುಕ್ತ ಮಂಗಳೂರು ತಹಶೀಲ್ದಾರ್ ಹಾಗೂ ಸಹಾಯಕನನ್ನು ಬಂಧಿಸುವ ಮೂಲಕ ಬಯಲಿಗೆಳೆದಿದೆ.

ಜಾಗ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಎನ್ಓಸಿ ನೀಡಲು ತಹಶೀಲ್ದಾರ್ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈತ ಅವರಿಂದ 4,700 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ್ ಹೆಗ್ಡೆಗಾಗಿ ತಾನು ಲಂಚ ಸ್ವೀಕರಿಸಿರುವುದಾಗಿ ಶಿವಾನಂದ ನಾಟೇಕರ್ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪುರಂದರ್ ಹೆಗ್ಡೆಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗೂ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

Edited By : Nirmala Aralikatti
PublicNext

PublicNext

01/10/2022 01:53 pm

Cinque Terre

23.71 K

Cinque Terre

0

ಸಂಬಂಧಿತ ಸುದ್ದಿ