ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂ. ಮೌಲ್ಯದ ಚಿನ್ನ ಸೀಝ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರಿ ಪ್ರಮಾಣದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಸೆ.25 ರಿಂದ 30ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಹಾಗೂ ಮಸ್ಕತ್ ನಿಂದ ಆಗಮಿಸಿರುವ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಈ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಕಾಸರಗೋಡು, ಭಟ್ಕಳ ಹಾಗೂ ತಿರುವನಂತಪುರಂ ಮೂಲದ ಐವರು ಪುರುಷ ಪ್ರಯಾಣಿಕರು ಈ ಚಿನ್ನ ಸಾಗಾಟ ಮಾಡುತ್ತಿದ್ದರು. ಇವರಿಂದ 24 ಕ್ಯಾರೆಟ್ ಶುದ್ಧತೆಯ 1,703 ಗ್ರಾಂ ತೂಕದ 86,09,730 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಯಾಣಿಕರು ಒಳುಡುಪುಗಳೊಳಗೆ, ಗುದನಾಳದಲ್ಲಿ ಮತ್ತು ಮಿಕ್ಸರ್ ಗ್ರೈಂಡರ್ ಮೋಟಾರ್ ಒಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅವರಿಂದ ಚಿನ್ನವನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

01/10/2022 03:07 pm

Cinque Terre

6.39 K

Cinque Terre

1

ಸಂಬಂಧಿತ ಸುದ್ದಿ