ಬಂಟ್ವಾಳ: ಚಡ್ಡಿಗಳೆ ಎಚ್ಚರ ಪಿಎಫ್ಐ. ನಾವು ಮರಳಿ ಬರುತ್ತೇವೆ ಈ ರೀತಿಯಲ್ಲಿ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆದು ಬಂಟ್ವಾಳದಲ್ಲಿ ಅಶಾಂತಿ ಯ ವಾತಾವರಣ ನಿರ್ಮಾಣ ಮಾಡಲು ಹೊರಟಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹ ಗಿರಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆಯಲ್ಲಿ ಬಹಿರಂಗ ಬೆದರಿಕೆ ಹಾಕಿದ ಬಗ್ಗೆ ವರದಿಯಾಗಿದೆ. ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿರುತ್ತಾರೆ. ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಇಡೀ ದೇಶವೇ ಆಯುಧ ಪೂಜೆಯ ಸಂಭ್ರಮದಿಂದ ಇದ್ದರೆ ಯಾರೋ ಕಿಡಿಗೇಡಿಗಳು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನಯನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ಆತಂಕಕ್ಕೆ ಕಾರಣವಾಗಿದೆ.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ಎ.ಎನ್.ಐ.ದಾಳಿಯ ಹಿನ್ನೆಲೆಯಲ್ಲಿ ಪಿ.ಎಫ್.ಐ.ಸಂಘಟನೆ ಚಡ್ಡಿಗಳೆ ಎಚ್ಚರ ಎಂಬ ಸಂದೇಶವನ್ನು ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೊಲೀಸರ ನಿದ್ದೆಗೆಡಿಸುವಂತೆ ಮಾಡಿದೆ.
PublicNext
04/10/2022 03:30 pm