ವಿಟ್ಲ: ವಾಚ್ ಅಂಗಡಿಯೊಂದರ ಶೆಟರ್ಸ್ ಮೇಲೆ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ನಡೆದಿದೆ.
ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು, ಅ.12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಅಂಗಡಿ ಮಾಲೀಕ ಅಬ್ದುಲ್ ವಿಟ್ಲ ಠಾಣೆಗೆ ದೂರು ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.
PublicNext
13/10/2022 01:09 pm