ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಮಧ್ಯಾಹ್ನ 5ಕ್ಕೆ ಗಂಟೆ ತನಕ ಪತ್ತೆಯಾಗಿಲ್ಲ.
ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಥಳಕೆ ಡಿಸಿ, ಹಾಗೂ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿ ಅವಲೋಕಿಸಿ ಮುಂದಿನ ಯಾವ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಜನ ಪ್ರತಿನಿಧಿಗಳಿಗೆ ಖಡಕ್ಕಾಗಿ ತಾಕಿತು ಮಾಡಿದ್ದಾರೆ.
ಸ್ವತಃ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಲ್ಲಿನ ವಾಸ್ತು ಸ್ಥಿತಿ ಅವಲೋಕಿಸಿದಾಗ, ಆ ಜಾಗದ ಪರಿಸ್ಥಿತಿ ಯಾರು ಹೋಗತೀರದಾಗಿದೆ ತೀರ ಕುಗ್ರಾಮವಾಗಿದ್ದು ಅಲ್ಲಿಗೆ ಯಾವುದೇ ರಸ್ತೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಸ್ಥಳವಾಗಿದ್ದು, ಅಲ್ಲಿ ಭತ್ತದೆ ಬೆಳೆ, ಅಡಿಕೆ ತೋಟ, ಅರಣ್ಯ ಇಲಾಖೆ ಸಂಬಂಧಪಟ್ಟ ಜಾಗ ಇರುವುದರಿಂದ ಇಂತಹ ಸಮಸ್ಯೆಯನ್ನು ಬಗೆಹರಿಸಲು ಕಷ್ಟ ಸಾಧ್ಯವಾಗಿರುತ್ತದೆ.
ಸ್ಥಳದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಬೈಂದೂರು ತಹಶೀಲ್ದಾರ್ ಕಿರಣ್ ಗೌರಯ್ಯ, ಮಾಜಿ ಶಾಸಕ ಕೆ ಗೋಪಾಲ್ ಪೂಜಾರಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ತಂಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
Kshetra Samachara
09/08/2022 10:59 pm