ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಯುವ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಮೃತದೇಹದ ಅಂತಿಮ ವಿಧಿವಿಧಾನ ನಡೆದು ಅಂತ್ಯಸಂಸ್ಕಾರ ನಡೆಸಲಾಯಿತು.
ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಸ್ಥಳದಲ್ಲಿ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರವೀಣ್ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.
ಬೆಳ್ಳಾರೆಯಲ್ಲಿ ಪೊಲೀಸರು ಮೈಕ್ ಮೂಲಕ ಜನರು ಚದುರಿ ಹೋಗುವಂತೆ ಕರೆ ನೀಡುತ್ತಿದ್ದರು. ಸಂಸದ ನಳಿನ್ ಕುಮಾರ್ ಕಾರನ್ನು ಧಿಕ್ಕಾರ ಕೂಗಿದ ಕಾರ್ಯಕರ್ತರು ತಡೆದರು. ಈ ಸಮಯದಲ್ಲಿ ಲಾಟಿಚಾರ್ಜ್ ನಡೆಸಲಾಗಿತ್ತು. ಇನ್ನುಳಿದಂತೆ ಕುಕ್ಕೆ ಸುಬ್ರಮಣ್ಯ, ಕಡಬ ಪೇಟೆಗಳು ಸಂಪೂರ್ಣ ಬಂದ್ ಆಗಿತ್ತು.
PublicNext
27/07/2022 07:04 pm