ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಪ್ರವೀಣ್ ಹತ್ಯೆ ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ..

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿದಂತೆ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನವನ್ನು ನೀಡಿತ್ತು. ಈ ನಡುವೆ ಪೋಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ನೀಡಿದೆ.

ಕಸ್ಟಡಿಗೆ ಪಡೆದ ಆರೋಪಿಗಳನ್ನು ಪೋಲೀಸರು ಮತ್ತೆ ತನಿಖೆಗೆ ಒಳಪಡಿಸಲಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳನ್ನು ಪಡೆಯುವ ಸಾಧ್ಯತೆಯಿದೆ.

Edited By :
PublicNext

PublicNext

30/07/2022 04:26 pm

Cinque Terre

38.21 K

Cinque Terre

3

ಸಂಬಂಧಿತ ಸುದ್ದಿ