ಬೈಂದೂರು ತಾಲೂಕಿನ ಒತ್ತಿನಣೆ ಕಾಡಲ್ಲಿ ಕಾರು ಮತ್ತು ವ್ಯಕ್ತಿಯ ಶವವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಟ್ಟು ಕರಕಲಾದ ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಕಾಣಿಸುತ್ತಿದ್ದು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮತ್ತು ಪಿ.ಎಸ್.ಐ ಪವನ್ ನಾಯಕ್ ತಂಡ ಆಗಮಿಸಿದ್ದು ಪ್ರಾಥಮಿಕ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ಕಾರು ಸುಟ್ಟು ಹೋಗಿ ದಿನಗಳೇ ಕಳೆದಿದ್ದು ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
13/07/2022 12:21 pm