ಉಡುಪಿ: ಸೋಶಿಯಲ್ ಮೀಡಿಯಾದಲ್ಲಿ ಮಕ್ಕಳ ಕಳ್ಳತನದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದು ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್ ಎಂ.ಹಾಕೆ ಎಚ್ಚರಿಕೆ ನೀಡಿದ್ದಾರೆ. ಬೇರೆ ಕಡೆಯ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಕ್ಕಳ ಕಳ್ಳರು ಬಂದಿದ್ದಾರೆಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಇದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಅಲ್ಲದೇ ಅಮಾಯಕರ ಮೇಲೆ ಹಲ್ಲೆ ಕೂಡಾ ನಡೆಸುತ್ತಿದ್ದಾರೆ.ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬೇಕು. ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕಷವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
16/09/2022 01:24 pm