ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಸಕಲ ವಿಧಿವಿಧಾನಗಳೊಂದಿಗೆ ಫಾಝಿಲ್ ಮೃತದೇಹಕ್ಕೆ ಅಂತ್ಯಸಂಸ್ಕಾರ!

ಸುರತ್ಕಲ್: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಫಾಝಿಲ್ ಮೃತದೇಹದ ದಫನಕ್ರಿಯೆಯು ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆ ಸಮೀಪದ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನಡೆಯಿತು.

ಆಸ್ಪತ್ರೆಯಿಂದ ಮನೆಗೆ ತಂದಿರುವ ಫಾಝಿಲ್ ಮೃತದೇಹದ ಅಂತಿಮ ದರ್ಶನಕ್ಕೆ ಮಹಿಳೆಯರಿಗೆ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ಮಸೀದಿಗೆ ತರಲಾಯಿತು. ಅಲ್ಲಿ ಪುರುಷರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಬಳಿಕ ಮಯ್ಯತ್ ನಮಾಜ್ ನೆರವೇರಿಸಲಾಯಿತು. ದಫನ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಮುಸ್ಲಿಂ ಧರ್ಮಗುರುಗಳಿಂದ ಕುರಾನ್ ಪಠಣ ನೆರವೇರಿ ಅಂತ್ಯಸಂಸ್ಕಾರ ನೆರವೇರಿತು.

ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು, ಬಿಗಿಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

Edited By : Manjunath H D
PublicNext

PublicNext

29/07/2022 11:03 am

Cinque Terre

51.15 K

Cinque Terre

4

ಸಂಬಂಧಿತ ಸುದ್ದಿ