ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: ಬಾಲಕಿಗೆ ಲೈಂಗಿಕ ಕಿರುಕುಳ; ಯುವಕ ಸಹಿತ ಅಪ್ರಾಪ್ತನ ಬಂಧನ

ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೆಜಮಾಡಿ ಆಲಡೆ ಬಳಿ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಮಗ ಯಾಸಿನ್(19) ಬಂಧಿತ ಆರೋಪಿ‌. ಆತನಿಗೆ ಸಹಕರಿಸಿದ ಬಾಲಕನನ್ನೂ ವಶಕ್ಕೆ ಪಡೆದು ಬಾಲಮಂದಿರಕ್ಕೆ ಸೇರಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಯಾಸಿನ್ ಮರುಳು ಮಾಡಿ ಹೆಜಮಾಡಿ ಆಲಡೆ ಬಳಿಯ ಅಪಾರ್ಟ್‌ಮೆಂಟ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಸ್ಥಳೀಯರು ಅನುಮಾನದಿಂದ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ವಿಚಾರಿಸಿದಾಗ ಯುವಕ ಕಿರುಕುಳ ನೀಡಿದ ವಿಷಯ ಬಯಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ಆತನ ಆಟೋರಿಕ್ಷಾವನ್ನೂ ವಶಕ್ಕೆ ಪಡೆಯಲಾಗಿದೆ. ಈತನಿಗೆ ಸಹಾಯ ಮಾಡಿದ ಅಪ್ರಾಪ್ತನನ್ನು ಬಾಲಮಂದಿರಕ್ಕೆ ಸೇರಿಸಲಾಗಿದೆ.

Edited By :
Kshetra Samachara

Kshetra Samachara

28/07/2022 12:08 pm

Cinque Terre

15.63 K

Cinque Terre

0

ಸಂಬಂಧಿತ ಸುದ್ದಿ