ಕಾರ್ಕಳ: ಉಡುಪಿಯಲ್ಲಿ ಹಲವಾರು ವರ್ಷಗಳಿಂದ ಮತಾಂತರ ಪ್ರಕ್ರಿಯೆ ನಡೆಯುತ್ತಿವೆ.ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿದ್ದಾರೆ.ಆರಂಭದಿಂದಲೂ ಹಿಂದೂ ಜಾಗರಣ ವೇದಿಕೆ ಈ ಬಗ್ಗೆ ಹೋರಾಟ ನಡೆಸುತ್ತಲೇ ಇದೆ.
ಸೂಕ್ತ ಮಾಹಿತಿಗಳು ಇದ್ದ ಹಿನ್ನೆಲೆಯಲ್ಲಿ ನಾವು ದಾಳಿ ಮಾಡಿದ್ದೇವೆ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಹೇಳಿದ್ದಾರೆ.
ಇವತ್ತಿನ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ,ಪೊಲೀಸರು ಮತಾಂತರ ಕೇಂದ್ರಕ್ಕೆ ಹೋಗಿ ವಿಚಾರಿಸಿದ್ದಾರೆ. ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ.
ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶ ಇದೆ. ಮತಾಂತರಿಗಳಿಗೆ ಕೋವಿಡ್ ನಿಯಮ ಪಾಲನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ.
ಪರಿಸ್ಥಿತಿ ಹದಗೆಡಲು ಅವಕಾಶ ಕೊಡಬೇಡಿ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಎಚ್ಚರಿಕೆ ನೀಡಿದ್ದಾರೆ.
Kshetra Samachara
10/09/2021 01:14 pm