ಕಟೀಲು: ಕಳೆದ ದಿನದ ಹಿಂದೆ ವಿಟ್ಲ ಸಾಲೆತ್ತೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ತುಳುನಾಡಿನ ಆರಾಧ್ಯ ದೈವ "ಕೊರಗಜ್ಜ" ದೈವದ ಬಗ್ಗೆ ವೇಷ ಧರಿಸಿ ಅವಹೇಳನ ಮಾಡಿರುವ ವಿಚಾರ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಬೇರೆ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಈ ಕೃತ್ಯ ಎಸಗಿದವರಿಗೆ ಒಳ್ಳೆ ಬುದ್ದಿ ಕರುಣಿಸುವಂತೆ ಕೋರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.
ಈ ಸಂಧರ್ಭ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಪಕ್ಷದ ಮುಖಂಡರು, ದೇವಸ್ಥಾನದ ಅರ್ಚಕ ವರ್ಗದವರು ಉಪಸ್ಥಿತರಿದ್ದರು.
Kshetra Samachara
11/01/2022 12:00 pm