ಮಂಗಳೂರು: ಸರ್ಕಾರಿ ಬಸ್ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ನಡುವೆ ವಾಗ್ವಾದ ನಡೆದು, ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಧರ್ಮಸ್ಥಳದ ಹೊಸ ಬಸ್ ಸ್ಟ್ಯಾಂಡ್ ವಠಾರದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಬಸ್ ನಿಲ್ಲಿಸಿದ ಜಾಗಕ್ಕೆ ಸಂಬಂಧಿಸಿದಂತೆ ಸರಕಾರಿ ಬಸ್ ಚಾಲಕರು ಮತ್ತು ರಿಕ್ಷಾ ಚಾಲಕರ ಮಧ್ಯೆ ಭಾರಿ ವಾಗ್ವಾದ ನಡೆದಿತ್ತು. ಈ ಮಾತಿನ ಚಕಮಕಿ ನಂತರ ವಿಕೋಪಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಆ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ದ್ದ ಸರಕಾರಿ ಬಸ್ಸು ಚಾಲಕರು ಹಾಗೂ ನಿರ್ವಾಹಕರು ಸೇರಿಕೊಂಡು ಆಟೋರಿಕ್ಷಾ ಚಾಲಕರಿಗೆ ತುಂಬಾ ಥಳಿಸಿದ್ದು, ಶೂ ನಿಂದಲೂ ಹಲ್ಲೆ ನಡೆಸಿದ್ದಾರೆ.
ಈ ಮಾರಾಮಾರಿ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ. ಎರಡೂ ಕಡೆಯಿಂದ ಧರ್ಮಸ್ಥಳ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/12/2020 12:28 pm