ಮಂಗಳೂರು: ಕಾಂಗ್ರೆಸ್ ಮತ್ತು ಎಸ್ ಡಿಪಿಐ ಕಾರ್ಯಕರ್ತರ ನಡುವೆ ಮಾರಾಮಾರಿ
ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಸಿರ್ ಹಾಗೂ ಆತನ ತಂಡವು ಎಸ್ ಡಿಪಿಐ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯು ಸೋತ ಕೋಪದಿಂದ ನಾಸಿರ್ ಹಾಗೂ ತಂಡ ಎಸ್ ಡಿಪಿಐ ಕಾರ್ಯಕರ್ತರ ಮೇಲೆ ತಲವಾರು ಬೀಸಿದೆ. ಮಾತಿಗೆ ಮಾತು ಬೆಳೆದು ಎರಡೂ ಪಕ್ಷದ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ. ಈ ಮಾರಾಮಾರಿ ವೇಳೆ ಮಹಿಳೆ ಸೇರಿ ಹಲವು ಮಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಸರದಲ್ಲಿ ಉದ್ವಿಗ್ನ ಪರಿಸ್ಥಿತಿಯಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Kshetra Samachara
31/12/2020 11:33 am