ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಏರ್‌ಪೋರ್ಟ್‌ನಲ್ಲಿ ಗುದನಾಳ, ಒಳ ಉಡುಪಿನಲ್ಲಿ 67 ಲಕ್ಷ ಮೌಲ್ಯದ ಚಿನ್ನ ಪತ್ತೆ; ಇಬ್ಬರ ಸೆರೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದೊಳಗೆ ಅಂಟುವ ಪೇಸ್ಟ್ ಗುಳಿಗೆ ಹಾಗೂ ವಿಶೇಷ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿರುವುದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಸೊತ್ತು ಸಹಿತ ಬಂಧಿಸಿದ್ದಾರೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪೈಸ್ ಜೆಟ್ ಎಸ್‌ಜಿ 146ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಆರೋಪಿಗಳ ಬಳಿಯಲ್ಲಿ 67 ಲಕ್ಷ ರೂ. ಮೌಲ್ಯದ 1.2 ಕಿ.ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದೆ. ಡಿಆರ್‌ಐ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಚಿನ್ನ ಸಾಗಾಟ ಪತ್ತೆ ಹಚ್ಚಿದ್ದಾರೆ.

ಭಟ್ಕಳದ ಮೂಲದ ಪ್ರಯಾಣಿಕ ಐದು ದೊಡ್ಡ ಗಾತ್ರದ ಪ್ಲಾಸ್ಟಿಕ್ ಕ್ಯಾಪ್ಸೂಲ್‌ನೊಳಗೆ ಚಿನ್ನದ ಪೇಸ್ಟ್ ತುಂಬಿಸಿ ಗುದದ್ವಾರದಲ್ಲಿಟ್ಟು ಸಾಗಾಟ ಮಾಡಿದ್ದ. ಈತನಿಂದ 641 ಗ್ರಾಂ ಹಾಗೂ ಇನ್ನೋರ್ವ ಕೇರಳದ ಕಾಸರಗೋಡಿನ ನಿವಾಸಿ 646 ಗ್ರಾಂ ಚಿನ್ನದ ಪೇಸ್ಟ್‌ನ್ನು ವಿಶೇಷ ಜೇಬು ಇರುವ ಒಳಚಡ್ಡಿಯಲ್ಲಿಟ್ಟು ಸಾಗಾಟ ಮಾಡಿದ್ದ. ಇಬ್ಬರಲ್ಲಿ ಒಟ್ಟು 1.2 ಕಿ.ಗ್ರಾಂ. ಚಿನ್ನ ಪತ್ತೆ ಮಾಡಲಾಗಿದೆ. ಆರೋಪಿಗಳು ಸಾಗಾಟ ಮಾಡಲು ಸಹಕಾರಿಯಾಗಲು ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿದ್ದರು. ಪತ್ತೆಯಾದ ಚಿನ್ನವು 999 ಪರಿಶುದ್ಧತೆ ಹೊಂದಿದೆ. ಬಂಧಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

06/01/2021 08:31 pm

Cinque Terre

42.17 K

Cinque Terre

6