ಬೆಂಗಳೂರು: ಫೋನ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಸ್ಕ್ರೂಡ್ರೈವರ್‌ನಿಂದ ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ನಡೆದಿದೆ.
ಮಂಜುನಾಥ್ ಯುವತಿಯ ಮೇಲೆ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ. ಮಂಜುನಾಥ್ ಸಂತ್ರಸ್ತ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಇಬ್ಬರ ನಡುವೆ ಜಗಳವಾಗಿ ಕಳೆದ ವರ್ಷ ಆಗಸ್ಟನ್‌ನಲ್ಲಿ ಇಬ್ಬರೂ ಬೇರೆ ಬೇರೆಯಾಗಿದ್ದರು. ಹೀಗಿದ್ದರೂ ಮಂಜುನಾಥ್ ಯುವತಿಗೆ ಪದೇ ಪದೇ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಆತನ ವರ್ತನೆಯಿಂದ ಬೇಸತ್ತ ಯುವತಿ ಆತನ ಫೋನ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು. ಇದರಿಂದ ಕೋಪಗೊಂಡ ಮಂಜುನಾಥ್ ತನ್ನ ಮಾಜಿ ಗೆಳತಿಯ ಮೇಲೆ ಹಲ್ಲೆ ಮಾಡಿದ್ದಾನೆ.
ಈ ಕುರಿತು ಕಾಮಾಕ್ಷಿ ಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಂಜುನಾಥ್‌ನನ್ನು ಬಂಧಿಸಿದ್ದಾರೆ.
Kshetra Samachara
12/01/2021 05:05 pm