ಮಂಗಳೂರು: ಇತ್ತೀಚೆಗೆ ನಡೆದ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಕ್ಷಿತ್ ಶೆಟ್ಟಿ, ರಾಹುಲ್ ಸಿನ್ಹಾ, ಅಲಿಸ್ಟಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳು ಮಕ್ಕಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಅಪಹರಣ ಮಾಡಲು ಯತ್ನಿಸಿದ್ದ ಸಂಗತಿ ತನಿಖೆಯಿಂದ ತಿಳಿದು ಬಂದಿದೆ. ಇದಕ್ಕೂ ಮುಂಚೆ ಇದೇ ಈ ಮೂವರ ಮೇಲೆ ಕೇಸ್ ದಾಖಲಾಗಿದ್ದವು. ಮಾದಕ ದ್ರವ್ಯ ಸಾಗಣೆ ಕೃತ್ಯಗಳಲ್ಲೂ ಇವರು ಭಾಗಿಯಾಗಿದ್ದಾರೆಂಬ ಗುಮಾನಿ ಇದೆ ಎಂದು ಆಯುಕ್ತ ಶಶಿಕುಮಾರ್ ತಿಳಿಸಿದರು.
ಉಳ್ಳಾಲದ ಬೀಫ್ ಮಳಿಗೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬೇಧಿಸಲಾಗಿದೆ. ಈ ಪ್ರಕರಣದ ಆರೋಪಿಯನ್ನು ನಾಗರಾಜ ಎಂದು ಗುರುತಿಸಲಾಗಿದೆ. ಹೆಚ್ಚು ಮಾಂಸ ನೀಡದ ಕಾರಣಕ್ಕೆ ಈತ ಬೀಫ್ ಅಂಗಡಿಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿಸಿದರು. ಡಿಸಿಪಿ ಹರಿರಾಮ್ ಶಂಕರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದರು.
Kshetra Samachara
16/01/2021 03:36 pm