ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಣಾಜೆ: ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಭಗವಾಧ್ವಜದ ಮೇಲೆ ಮಲ- ಮೂತ್ರ ವಿಸರ್ಜನೆ!

ಮಂಗಳೂರು: ಭಗವಾಧ್ವಜದ ಮೇಲೆ ಮಲ-ಮೂತ್ರ ವಿಸರ್ಜಿಸಿ, ಕಳವಿಗೂ ವಿಫಲ ಯತ್ನ ನಡೆಸಿದ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ನಡೆದಿದೆ.

ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ ನಲ್ಲಿರುವ ಶ್ರೀ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಮತ್ತು ಬಿಜೆಪಿ ಮುಖಂಡರ ಪತ್ರಿಕಾ ಜಾಹೀರಾತಿನಲ್ಲಿ ಅವಾಚ್ಯ ಶಬ್ದಗಳನ್ನು ಬರೆದಿರುವ ಪತ್ರ ಹಾಕಿರುವುದು ಬೆಳಕಿಗೆ ಬರುತ್ತಿದ್ದಂತೆಯೇ, ಇದೀಗ ಕೊಣಾಜೆ ಭಜನಾ ಮಂದಿರದಲ್ಲಿ ದುಷ್ಕೃತ್ಯ ಎಸಗಲಾಗಿದೆ.

ಮಂದಿರದ ಬಾಗಿಲು ಒಡೆಯಲು ಯತ್ನಿಸಿದ ದುಷ್ಕರ್ಮಿಗಳು ಸ್ಥಳದಲ್ಲಿದ್ದ ಭಗವಾಧ್ವಜಕ್ಕೆ ಮಲ- ಮೂತ್ರ ವಿಸರ್ಜಿಸಿ ತೆರಳಿದ್ದಾರೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

21/01/2021 01:09 pm

Cinque Terre

24.25 K

Cinque Terre

5

ಸಂಬಂಧಿತ ಸುದ್ದಿ