ಮಂಗಳೂರು: ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 57 ಲಕ್ಷ ರೂ. ಮೌಲ್ಯದ 1.119 ಕೆ.ಜಿ. ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕುಂಞಿ ಹಮೀದ್ ಹಾಗೂ ಮೂಡುಬಿದಿರೆ ತಾಲೂಕಿನ ಮುಹಮ್ಮದ್ ಮುನಾಝ್ ಬಂಧಿತರು.
ದುಬೈನಿಂದ ಬಂದಿರುವ ಸ್ಪೈಸ್ ಜೆಟ್ ವಿಮಾನದಲ್ಲಿ ಆಗಮಿಸಿರುವ ಈ ಇಬ್ಬರು 1.119 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಈ ಚಿನ್ನವನ್ನು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂಧಿಸಿ ಬಜಪೆ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Kshetra Samachara
26/01/2021 10:34 pm