ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಬಾಲಕನ ಅಪಹರಣ ಪ್ರಕರಣದ ಆರೋಪಿಗಳಿಗೆ ದ.ಕ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮನೆಯ ಮುಂದೆಯೇ ಆಡುತ್ತಿದ್ದ ಬಾಲಕ ಅನುಭವ್ ನನ್ನು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅಪಹರಿಸಿದ್ದರು. ಬಳಿಕ ಬಾಲಕನ ಪೋಷಕರಿಗೆ ಕರೆ ಮಾಡಿ 17 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದರು. ಈ ಮೊತ್ತವನ್ನು ನಗದು ಅಥವಾ ಚೆಕ್ ಮೂಲಕ ನೀಡದೆ ಬಿಟ್ ಕಾಯಿನ್ ಮೂಲಕ ನೀಡುವಂತೆ ಅಪಹರಣಕಾರರು ಒತ್ತಾಯಿಸಿದ್ದರು.
ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂರು ದಿನಗಳ ಒಳಗೆ ಕೋಲಾರದ ಮನೆಯೊಂದರಲ್ಲಿ ಬಾಲಕನನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ರಕ್ಷಿಸಿ, 6 ಮಂದಿ ಅಪಹರಣಕಾರರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಮಾಲೂರಿನ ಕೊರ್ನಹೊಸಳ್ಳಿಯ ಮಂಜುನಾಥ್ ಮತ್ತು ಮಹೇಶ್ ಎಂಬ ಇಬ್ಬರು ಜಾಮೀನು ಅರ್ಜಿ ಹಾಕಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
Kshetra Samachara
27/01/2021 10:54 pm