ಮಂಗಳೂರು: ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರೊಬ್ಬರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಕೆ.ವಿ. ಜಯರಾಜ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ.
ಇದರ ಜೊತೆಗೆ ಅವರ ಕಚೇರಿ, ಮಂಗಳೂರಿನ ಪಡೀಲ್ ಬಳಿಯ ಜಯರಾಜ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಜ್ ಪತ್ನಿಯ ಮನೆ ಮೇಲೂ ದಾಳಿ ನಡೆದಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್‌ಪೆಕ್ಟರ್ ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ಇದ್ದಾರೆ.
Kshetra Samachara
02/02/2021 12:06 pm