ಕಾಪು: ಇಲ್ಲಿನ ಮೂಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಶ್ರೀ ನಾರಾಯಣಗುರು ಮಂದಿರಕ್ಕೆ ತಡರಾತ್ರಿ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ ಘಟನೆ ಗುರುವಾರ ನಡೆದಿದೆ.
ಪೂಜೆಗಾಗಿ ಅರ್ಚಕರು ಬೆಳಗ್ಗಿನ ಜಾವ ಮಂದಿರಕ್ಕೆ ಬಂದಾಗಲಷ್ಟೇ ಕಳವು ನಡೆದ ಬಗ್ಗೆ ಅರಿವಿಗೆ ಬಂದಿದ್ದು, ಅವರು ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
04/02/2021 12:35 pm