ಕುಂದಾಪುರ: ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗುಜ್ಜಾಡಿ ಬೆಣ್ಣಗೇರಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿಯ ಹೊಸಮನೆ ಸಚಿನ್ ಪೂಜಾರಿ (24) ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸಕ್ಕಿದ್ದು, ಲಾಕ್ ಡಾನ್ ಸಮಯ ಮನೆಯಲ್ಲಿ ಕಂಪನಿ ಕೆಲಸ ವರ್ಕ್ ಫ್ರಂ ಹೋಂ ಮಾಡುತ್ತಿದ್ದ. ಈ ನಡುವೆ ಸಾಲದ ಬಾಧೆ ಜಾಸ್ತಿಯಾಗಿ ಮಾನಸಿಕವಾಗಿ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳ, ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣೆ ಎಸ್ಐ ಭೀಮ್ ಶಂಕರ್ ಭೇಟಿ ನೀಡಿದ್ದಾರೆ. ಪ್ರಕರಣ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Kshetra Samachara
08/02/2021 10:54 am