ಮಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪುತ್ತೂರು ಸಾರಿಗೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಕಂಡಕ್ಟರ್ ಬಾಲಕೃಷ್ಣ ಎಂಬವರು ಉಳ್ಳಾಲದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಲಕೃಷ್ಣ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು ನದಿಗೆ ಹಾರಿದ್ದಾರೆ. ಡೆತ್ ನೋಟ್ ನಲ್ಲಿ ತನ್ನ ಸಹೋದರ ಹಾಗೂ ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದು, KSRTC ಸಂಸ್ಥೆಯಲ್ಲಿ ತಮಗಾಗುತ್ತಿದ್ದ ನಿರಂತರ ಕಿರುಕುಳದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಮೇಲಧಿಕಾರಿಗಳು ಸತತ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಬಾಲಕೃಷ್ಣ, ನನ್ನ ಮಕ್ಕಳು- ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆಗೆ ಅಡ್ಡವಾಗಿ ಸದೃಢ ಬೇಲಿ ಹಾಕಿದ್ದರೂ ಆತ್ಮಹತ್ಯೆ ಮಾಡಿಕೊಳ್ಳುವವರು ಬಳಿಯ ರೈಲ್ವೆ ಸೇತುವೆಯ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.
Kshetra Samachara
11/02/2021 11:20 am