ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿ ನೇಣಿಗೆ ಶರಣು

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ವೇಣೂರಿನಲ್ಲಿ ನಡೆದಿದೆ.

ಕತ್ತೋಡಿಬೈಲು ನಿವಾಸಿ ಸೌಮ್ಯಾ (19) ಮೃತ ವಿದ್ಯಾರ್ಥಿನಿ. ಸೌಮ್ಯಾ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಲಾಕ್‌ಡೌನ್ ಬಳಿಕ ಕಾಲೇಜು ತೆರೆದಿದ್ದರೂ ತರಗತಿಗೆ ಹೋಗದೇ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸೌಮ್ಯಾ ಎಂದಿನಂತೆ ಇಂದು ಬೆಳಿಗ್ಗೆ ಮನೆಯಲ್ಲಿ ಉಪಹಾರ ಮುಗಿಸಿದ್ದರು. ಅದಾದ ಬಳಿ ಅವರು ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಹೀಗಾಗಿ ಮನೆಯವರು ಸೌಮ್ಯಾಗಾಗಿ ಹುಡುಕಾಟ ಅನಡೆಸಿದ್ದರು. ಈ ವೇಳೆ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಸೌಮ್ಯಾ ಮೃತದೇಹ ಪತ್ತೆಯಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

20/02/2021 08:46 pm

Cinque Terre

12.1 K

Cinque Terre

0

ಸಂಬಂಧಿತ ಸುದ್ದಿ