ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸರ್ವೇಯರ್ ಗಂಗಾಧರ್ ಎಸಿಬಿ ಬಲೆಗೆ

ಮಂಗಳೂರು: ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ (ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ ಎಂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ‌.

ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆದಿದ್ದರು. ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆಗೆ ಸರ್ವೇಯರ್ ಗಂಗಾಧರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆಗೆ ಲಂಚದ ಹಣ 3 ಸಾವಿರ ರೂ. ನೀಡಿ ಮತ್ತೊಂದು ತಿಂಗಳು ಕಳೆಯಿತು. ಮತ್ತೆ ಮರ ಇರುವ ಸ್ಥಳದ ನಕಾಶೆ ನೀಡಲು 30 ಸಾವಿರ ರೂ. ಡಿಮ್ಯಾಂಡ್ ಇಟ್ಟಿದ್ದರು.

ಇದರಿಂದ ಮನ ನೊಂದ ಉದ್ಯಮಿ, ಮಂಗಳೂರಿನ ಪರಿಸರ ಸಂರಕ್ಷಣಾ ಸದಸ್ಯರ ಗಮನಕ್ಕೆ ಈ ವಿಚಾರವನ್ನು ತಂದಿದ್ದರು. ತಕ್ಷಣ ಇದನ್ನು ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಅವರ ಗಮನಕ್ಕೆ ತರಲಾಯಿತು. 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಮಂಗಳವಾರ 5.30ರ ಸುಮಾರಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ 20 ಸಾವಿರ ರೂ. ಲಂಚದ ಹಣ ಪಡೆದುಕೊಳ್ಳುವ ಸಮಯ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

24/02/2021 10:49 am

Cinque Terre

17.18 K

Cinque Terre

3

ಸಂಬಂಧಿತ ಸುದ್ದಿ