ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಂಗ್ರೆಸ್ ಮುಖಂಡನಿಗೆ ಜೀವ ಬೆದರಿಕೆ, ಮನೆಗೆ ಹಾನಿ; ಆಕ್ರೋಶ

ಉಡುಪಿ: ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ, ಗ್ರಾಪಂ ಸದಸ್ಯ ಎನ್. ರಮೇಶ್ ಶೆಟ್ಟಿ ಕುಕ್ಕೆಹಳ್ಳಿ ಅವರ ಮನೆಗೆ ಪುಂಡರು ನುಗ್ಗಲು ಪ್ರಯತ್ನಿಸಿದ್ದಾರೆ.

ಆದರೆ, ಈ ಪ್ರಯತ್ನದಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಮನೆಯ ಕಿಟಕಿ-ಬಾಗಿಲು ಒಡೆದು, ಎದುರು ಭಾಗದ ಲೈಟ್ ಗಳನ್ನು ಹೊಡೆದು ಹಾಕಿದ್ದಾರೆ. ನಿಲ್ಲಿಸಿದ ವಾಹನವನ್ನು ಜಖಂಗೊಳಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.

ಈ ಘಟನೆ ಖಂಡಿಸಿ ರಮೇಶ್ ಶೆಟ್ಟಿ ಅವರ ನಿವಾಸದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಜನಾರ್ದನ ತೋನ್ಸೆ, ಪ್ರಖ್ಯಾತ್ ಶೆಟ್ಟಿ, ಭುಜಂಗ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಹರೀಶ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಹಾರಾಡಿ ಸದಾಶಿವ ನಾಯ್ಕ್, ತಾಜುದ್ದೀನ್, ಜಯ ಶೆಟ್ಟಿ ಬನ್ನಂಜೆ, ವಾಲ್ಟರ್ ಡಿಸೋಜ ಕೊಳಲಗಿರಿ, ಶಂಕರ್ ಶೆಟ್ಟಿ, ರತ್ನಾಕರ ಮೊಗವೀರ ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ತುರ್ತಾಗಿ ಸೇರಿ ಖಂಡನಾ ಸಭೆ ನಡೆಸಿದರು.

ದುಷ್ಕರ್ಮಿಗಳು ಜೀವ ಬೆದರಿಕೆ ಒಡ್ಡಿ, ಮನೆಗೆ ಹಾನಿ ಮಾಡಿದ್ದನ್ನು ಖಂಡಿಸಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಒಕ್ಕೊರಲಿನಿಂದ ಆಗ್ರಹಿಸಲಾಯಿತು.

Edited By : Manjunath H D
Kshetra Samachara

Kshetra Samachara

26/02/2021 06:28 pm

Cinque Terre

31.75 K

Cinque Terre

4

ಸಂಬಂಧಿತ ಸುದ್ದಿ