ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪೊಲೀಸ್ ಕಮಿಷನರ್ 'ಮಿಡ್ ನೈಟ್ ಆಪರೇಷನ್'; ಅಕ್ರಮ ಮರಳು ಸಾಗಾಟಗಾರರಿಗೆ ಶಾಕ್

ಮಂಗಳೂರು: ತಡರಾತ್ರಿ ಸ್ಕೂಟರ್ ನಲ್ಲಿ ಬಂದು ಕಾರ್ಯಾಚರಣೆ ನಡೆಸಿ ಮಂಗಳೂರಿನ ಇಬ್ಬರು ವರಿಷ್ಠ ಪೊಲೀಸ್ ಅಧಿಕಾರಿಗಳು ಅಕ್ರಮ ಮರಳು ದಂಧೆಕೋರರಿಗೆ ಶಾಕ್ ನೀಡಿದ್ದಾರೆ.

ಸ್ವತಃ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗೂ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಅವರು ಬರ್ಮುಡಾ, ನೈಟ್ ಡ್ರೆಸ್ ನಲ್ಲಿ ಮಫ್ತಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಂಗಳೂರಿನಿಂದ ಕೇರಳಕ್ಕೆ ಎಗ್ಗಿಲ್ಲದೆ ಸಾಗಾಟ ಮಾಡುತ್ತಿದ್ದ ಮರಳು ದಂಧೆಕೋರರ ಹೆಡೆಮುರಿಕಟ್ಟಿದ್ದಾರೆ.

ಕಾನೂನಿನ ಪ್ರಕಾರ ಕರ್ನಾಟಕದಿಂದ ಹೊರ ರಾಜ್ಯಗಳಿಗೆ ಮರಳನ್ನು ಸಾಗಿಸುವಂತಿಲ್ಲ. ಆದರೆ, ಮಂಗಳೂರಿನಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ರಹಸ್ಯ ಕಾರ್ಯಾಚರಣೆ ನಡೆಸಿದ್ದು, ತಡರಾತ್ರಿ 3 ಗಂಟೆಗೆ ಸ್ಕೂಟರ್ ನಲ್ಲಿ ಸಾಮಾನ್ಯ ನಾಗರಿಕರ ರೀತಿ ತಲಪಾಡಿ ಗಡಿಗೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ನೇರವಾಗಿ ಟೋಲ್ ಗೇಟ್ ನಲ್ಲಿ ಹಾದು ಬಂದಿದೆ. ಅಡ್ಡಗಟ್ಟಿ ತಪಾಸಣೆ ನಡೆಸಿದ ಇಬ್ಬರೂ ಅಧಿಕಾರಿಗಳು,ಅಕ್ರಮವಾಗಿ ಮರಳು ಸಾಗಿಸುವುದನ್ನು ಪತ್ತೆ ಹಚ್ಚಿದ್ದಾರೆ. ಈ ದೃಶ್ಯ ಟೋಲ್ ಗೇಟ್ ನ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಮಾತನಾಡಿ, ಮರಳು ಸಾಗಾಟದ ಲಾರಿಗೆ ಎರಡು ಕಾರುಗಳ ಮೂಲಕ ಎಸ್ಕಾರ್ಟ್ ನೀಡಿದ್ದು, ಸಹ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್, ಕಾರು ಬೆನ್ನಟ್ಟುವಂತೆ ತಿಳಿಸಿದ್ದಾರೆ. ಈ ಸಂದರ್ಭ ಉಳ್ಳಾಲ ಪೊಲೀಸರನ್ನು ತಳ್ಳಿ ಹಾಕಿ ಕಾರಿನಲ್ಲಿದ್ದವರು ಕಾರು ಬಿಟ್ಟು ಎಸ್ಕೇಪ್ ಆಗಿದ್ದಾರೆ. ಅಕ್ರಮ ಮರಳು ಸಾಗಾಟ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಎರಡು ಪ್ರಕರಣ ದಾಖಲಾಗಿದೆ. ಮರಳು ಲಾರಿ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

28/02/2021 07:03 pm

Cinque Terre

23.49 K

Cinque Terre

2