ವಿಟ್ಲ: 2 ಕೆ.ಜಿ. ಗಾಂಜಾ ಸಹಿತ ಆರೋಪಿ ಸೆರೆ, ಇನ್ನಿಬ್ಬರಿಗೆ ಶೋಧ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡುಂಗಾಯಿ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುವ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆ ಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ ನಿರ್ದೇಶನದಂತೆ ಬಂಟ್ವಾಳ ಡಿವೈ ಎಸ್ಪಿ ವೆಲೈಂಟಿನ್ ಡಿಸೋಜ ಅವರ ಸೂಚನೆಯಂತೆ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸ್ ಠಾಣೆ ಪಿ.ಎಸ್.ಐ. ವಿನೋದ್ ಎಸ್.ಕೆ. ಅವರು ಸಿಬ್ಬಂದಿ ಪ್ರಸನ್ನ , ಜಯರಾಮ ಕೆ.ಟಿ., ಪ್ರತಾಪ್ ರೆಡ್ಡಿ, ಲೋಕೇಶ, ಹೇಮರಾಜ್ ಹಾಗೂ ವಿನಾಯಕ ಜೊತೆ ಮಂಗಳವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಕರಣ ಪತ್ತೆಯಾಗಿದೆ.

ರಾತ್ರಿ ಸುಮಾರು 7.30ರ ಸಮಯದಲ್ಲಿ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ 2 ಕೆ.ಜಿ. ತೂಕದ 20 ಸಾವಿರ ರೂ. ಬೆಲೆಬಾಳುವ ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಕಾರು ಸಹಿತ ಗಾಂಜಾವನ್ನು ಸ್ವಾಧೀನಪಡಿಸಿಕೊಂಡು ಕೇರಳದ ಮಂಜೇಶ್ವರ ತಾಲೂಕಿನ ಪಾತೂರು ಕಜೆ ನಿವಾಸಿ ನಾಸಿರ್ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

Kshetra Samachara

Kshetra Samachara

10 days ago

Cinque Terre

12.18 K

Cinque Terre

1

  • mangesha
    mangesha

    drugs mafia matta haki....beru sahita Kittu haki