ಬಂಟ್ವಾಳ: ರಾತ್ರಿ ಮನೆಯಿಂದ ಹೊರ ಬಂದ ಯುವಕ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.
ಕಾರ್ತಿಕ್ (25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮನೆಯಿಂದ ಹೊರಟ ಕಾರ್ತಿಕ್ ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತನ ಹುಡುಕಾಟ ಆರಂಭಿಸಿದ್ದರು. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್‌ನ ಮೃತದೇಹವು ರೈಲು ಹಳಿಯ ಮೇಲೆ ಪತ್ತೆಯಾಗಿದೆ.
ಈ ಸಂಬಂಧ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದನ್ವಯ ಡಿವೈಎಸ್‌ಪಿ ವೆಲಂಟೈನ್ ಡಿಸೋಜ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
Kshetra Samachara
30/07/2021 10:50 am