ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಲೆಕ್ಕಪರಿಶೋಧಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ

ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ.

ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು. ಮಣಿಪಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಹೊಂದಾಳಿ ಘಟನಾ ಸ್ಥಳದಲ್ಲಿದ್ದ ಕಾನೂನು ಪ್ರಕ್ರಿಯೆ ನಡೆಸಿದರು. ಮೃತ ವ್ಯಕ್ತಿ ಸತೀಶ್ ಕುಮಾರ್, (54 ವ) ತಂದೆ ಶೇಖರ, ಕರಂಬಳ್ಳಿ ವಿ.ಎಮ್ ನಗರದ ನಿವಾಸಿ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Edited By : Shivu K
Kshetra Samachara

Kshetra Samachara

03/08/2021 04:40 pm

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ