ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳ ಆರೋಪಿಯಾಗಿದ್ದ ಮುಲ್ಕಿ ಸಮೀಪದ ಚಿತ್ರಾಪು ಮೂಲದ ದಿಲೀಪ್ ದೇವಾಡಿಗ (42) ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಕೋಮುಗಲಬೆ ಗಾಂಜಾ ಸೇವನೆ ಸಹಿತ ಹತ್ತಕ್ಕೂ ಹೆಚ್ಚು ಹಳೆ ಪ್ರಕರಣಗಳು ದಾಖಲಾಗಿದ್ದು ತನಿಖೆ ನಡೆಯುತ್ತಿರುವ ವೇಳೆಯಲ್ಲಿ ಏಕಾಏಕಿ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಬಗ್ಗೆ ಮುಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಈತ ಮೀನುಗಾರಿಕಾ ವೃತ್ತಿಯನ್ನು ನಡೆಸುತ್ತಿದ್ದು ಪತ್ನಿ ಹಾಗೂ ಮಕ್ಕಳ ಜೊತೆ ಸಮೀಪದ ಗೇರುಕಟ್ಟೆ ಎಂಬಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೃದಯಾಘಾತದಿಂದ ಅನುಮಾನಾಸ್ಪದ ಸಾವಿನ ಬಗ್ಗೆ ಮುಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
05/08/2021 04:27 pm