ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಪದವಿಪೂರ್ವ ಕಾಲೇಜಿನಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್ ವಿರುದ್ಧ ಕಾಲೇಜು ವಠಾರದಲ್ಲಿ ಸಾರ್ವಜನಿಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದ ಶಿಕ್ಷಕನ ಜಾಮೀನು ಮತ್ತು ಕೆಲಸದಿಂದ ವಜಾ ಮಾಡಬೇಕು ಹಾಗೂ ಆತನ ಮೊದಲನೇ ಮದುವೆಯಾದಲ್ಲಿಂದಲೇ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಶಿಕ್ಷಕ ಗುರುರಾಜ್ ವಿದ್ಯಾರ್ಥಿನಿಯೊಬ್ಬಳನ್ನು ಪ್ರಾಜೆಕ್ಟ್ ಕೆಲಸ ಹಾಗೂ ಟ್ಯೂಷನ್ ನೆಪದಲ್ಲಿ ಮನೆಗೆ ಕರೆಯಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ವಿದ್ಯಾರ್ಥಿನಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಆರೋಪಿ ಗುರುರಾಜ್ ವಿಕೃತಕಾಮಿ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು.
ಹೀಗಾಗಿ ಫೋಕ್ಸೋ ಕಾಯಿದೆಯನ್ವಯ ಅಪ್ತಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿದ ಬಗ್ಗೆ ಕೇಸು ದಾಖಲಾಗಿತ್ತು. ಆರೋಪಿ ಶಿಕ್ಷಕ ಗುರುರಾಜ್ ಮೊದಲ ಪತ್ನಿ ಮೃತಪಟ್ಟಿದ್ದು ಎರಡನೇ ಮದುವೆಯಾಗಿದೆ. ಹೀಗಾಗಿ ಮೊದಲನೇ ಪತ್ನಿ ಮೃತಪಟ್ಟಲ್ಲಿಂದಲೇ ತನಿಖೆಯಾಗಬೇಕು, ಈ ಶಿಕ್ಷಕನಿಗೆ ಇಂತಹದ್ದೇ ಕೃತ್ಯ ಇರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ಈತನಿಗೆ ಬೆಂಬಲ ನೀಡುವ ಇನ್ನೂ ಕೆಲವರು ಇರುವ ಅನುಮಾನವೂ ಇದ್ದು ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
Kshetra Samachara
11/08/2021 01:22 pm