ಬಂಟ್ವಾಳ: ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52 ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಆರೋಪದ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಎಂಬಲ್ಲಿ ನಡೆದಿದ್ದು, ಅನಿಲ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ಸಂದರ್ಭ ಆರೋಪಿ ಈ ಕೃತ್ಯ ಎಸಗಿದ್ದು, ಬಳಿಕ ಮಹಿಳೆ ತನ್ನ ಮಗಳು, ಅಳಿಯನಿಗೆ ವಿಷಯ ತಿಳಿಸಿದ್ದಾರೆ.
Kshetra Samachara
14/08/2021 02:52 pm