ಕುಂದಾಪುರ : ನಾಪತ್ತೆಯಾಗಿದ್ದ ಆಟೋ ಚಾಲಕನ ಶವವು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಘಟನೆ ನಡೆದಿರುವುದು ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ.
ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೆ ಶರಣಾದ ಯುವಕ. ವಕ್ವಾಡಿ ರಿಕ್ಷಾ ನಿಲ್ದಾಣದಲ್ಲಿ ಆಟೋ ಚಾಲಕರಾಗಿದ್ದ ರವಿಚಂದ್ರ ಕುಲಾಲ್ ಸೋಮವಾರ ಮಧ್ಯಾಹ್ನದ ಸುಮಾರಿಗೆ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದರು.
ಸ್ನೇಹಿತರು ಹಾಗೂ ಮನೆಯವರು ನಿರಂತರವಾಗಿ ಕರೆ ಮಾಡಿದರೂ ರವಿಚಂದ್ರ ಕರೆ ಸ್ವೀಕರಿಸಿರಲಿಲ್ಲ. ಕೊನೆಗೆ ಸ್ನೇಹಿತರು, ವಕ್ವಾಡಿ ಭಾಗದಲ್ಲಿ ಹುಡುಕಾಟ ನಡೆಸಿದಾಗ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವಿಚಂದ್ರ ಕುಲಾಲ್ ಮೃತದೇಹ ಪತ್ತೆಯಾಗಿದೆ.
Kshetra Samachara
18/08/2021 03:11 pm