ಮುಲ್ಕಿ: ಮುಲ್ಕಿ ಬಸ್ಸು ನಿಲ್ದಾಣದಲ್ಲಿ ಬಸ್ಸು ಹಾಗೂ ರಿಕ್ಷಾ ಚಾಲಕರ ನಡುವೆ ಗುರುವಾರ ಬೆಳಿಗ್ಗೆ ಮಾತಿನ ಚಕಮಕಿ ನಡೆದಿದೆ.
ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಆಟೋ ರಿಕ್ಷಾ ಚಾಲಕನು ಪ್ರಯಾಣಿಕರನ್ನು ರಿಕ್ಷಾದಲ್ಲಿ ಕುಳ್ಳಿರಿಸಿದ್ದಾರೆಂದು ಆರೋಪಿಸಿ ಅದೇ ದಾರಿಯಿಂದ ಕಟೀಲಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ಸು ಚಾಲಕ ಆಟೋ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಮಾತಿಗೆ ಮಾತು ಬೆಳೆದು ಮುಲ್ಕಿ ಬಸ್ ನಿಲ್ದಾಣದ ಬಳಿ ರಿಕ್ಷಾ ಹಾಗೂ ಬಸ್ಸು ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ.
ರಿಕ್ಷಾ ಚಾಲಕರು ಮಾತನಾಡಿ ನಾವೇನು ಒತ್ತಾಯಪೂರ್ವಕವಾಗಿ ಪ್ರಯಾಣಿಕರನ್ನು ಕರೆದುಕೊಂಡು ಬಂದಿಲ್ಲ, ಕ್ಷುಲ್ಲಕ ಕಾರಣಕ್ಕೆ ಬಸ್ಸಿನ ಚಾಲಕ ತಗಾದೆ ತೆಗೆದಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಸಂದರ್ಭ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆಯಲ್ಲಿ ಬಸ್ಸಿನ ಚಾಲಕ ಮೊಬೈಲ್ ಮೂಲಕ ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದುದು ಆಟೋ ಚಾಲಕರನ್ನು ಮತ್ತೆ ಕೆರಳಿಸಿದೆ. ಕೂಡಲೇ ಬಸ್ಸು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಹರಕ್ಷಕ ದಳ ಸಿಬ್ಬಂದಿ ಇಬ್ಬರನ್ನು ಸಮಾಧಾನಪಡಿಸಿದ್ದಾರೆ.
Kshetra Samachara
19/08/2021 10:51 pm