ಮಂಗಳೂರು: ನಗರದ ನೇತ್ರಾವತಿ ನದಿಯ ರೈಲ್ವೆ ಬ್ರಿಡ್ಜ್ ಬಳಿ ಪರ್ಸ್, ಚಪ್ಪಲಿ ಬಿಟ್ಟು ಆ.20ರಂದು ನಾಪತ್ತೆಯಾಗಿದ್ದ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಎಂಬವರ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ.
ಮಂಗಳೂರಿನ ಧಕ್ಕೆಯಲ್ಲಿ ಕೂಲಿ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಆದರೆ ರಾತ್ರಿಯಾದರೂ ಮನಗೆ ಮರಳಿ ಬಾರದೆ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದಾಗ ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಈ ಬಗ್ಗೆ ಅವರ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಇಂದು ಹಫೀಝ್ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು, ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
22/08/2021 09:24 pm