ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಟೀಲು ಪೆರ್ಮುದೆಯ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆ ಆರೋಪಿ ಕಟೀಲು ಪೆರ್ಮುದೆಯ ರಾಮಕೃಷ್ಣ ಎಂಬವರ ಮನೆಯಲ್ಲಿ ಬಾಡಿಗೆಯಲ್ಲಿದ್ದರು. ಆಕೆ ಆಗಸ್ಟ್ 21ರಂದು ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದು, ಆಗ ತನ್ನ ಮೂವರು ಮಕ್ಕಳನ್ನು ಪೆರ್ಮುದೆಯ ಬಾಡಿಗೆ ಮನೆಯಲ್ಲೇ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಮರುದಿನವೂ ಆರೋಪಿ ಇದೇ ರೀತಿ ಕಿರುಕುಳ ಎಸಗಿದ್ದ ಎನ್ನಲಾಗಿದೆ. ತಾಯಿ ಪೆರ್ಮುದೆಗೆ ವಾಪಸಾದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kshetra Samachara
26/08/2021 11:08 am