ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಕಂಬಳಬೆಟ್ಟು ಬಳಿ ಅಕ್ರಮ ರಸ್ತೆ ನಿರ್ಮಾಣ

ಮುಲ್ಕಿ: ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ ಹತ್ತನೇ ತೋಕೂರು ಕಂಬಳಬೆಟ್ಟು ಬಳಿ ಉದ್ಯಮಿಯೊಬ್ಬರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಿ ರಸ್ತೆ ಕಾಮಗಾರಿ ನಡೆಸುತ್ತಿದ್ದು ಈ ಬಗ್ಗೆ ಮುಲ್ಕಿ ತಹಶಿಲ್ದಾರ್ ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪಡುಪಣಂಬೂರು ಗ್ರಾಪಂ ವ್ಯಾಪ್ತಿಯ ಹತ್ತನೇ ತೋಕೂರು (ಪುನರೂರು ಶಾಲೆಯ ಬಳಿಯ ರಾಜ್ಯ ಹೆದ್ದಾರಿಯಲ್ಲಿ) ಅಂಗನವಾಡಿಗೆ ಮೀಸಲಿಟ್ಟ ಜಾಗದಲ್ಲಿ ಖಾಸಗಿಯವರ ಸೈಟ್ ಗೆ ಹೋಗುವ ರಸ್ತೆ ನಿರ್ಮಾಣದ ಮುಖಾಂತರ ಅಕ್ರಮವಾಗಿ ಆವರಣ ಗೋಡೆ ಕಾಮಗಾರಿ ರಾಜಾರೋಷವಾಗಿ ನಡೆಯುತ್ತಿದೆ. ಬಗ್ಗೆ ಅನೇಕ ಬಾರಿ ಪಂಚಾಯತಿಗೆ, ಮುಲ್ಕಿ ತಹಶೀಲ್ದಾರ್ ಅವರಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ.

ಕೂಡಲೇ ಅಕ್ರಮ ಕಾಮಗಾರಿಯನ್ನು ನಿಲ್ಲಿಸುವ ಮುಖಾಂತರ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

26/08/2021 06:10 pm

Cinque Terre

32.28 K

Cinque Terre

0

ಸಂಬಂಧಿತ ಸುದ್ದಿ